MEGHA
Wishes
MEGHA
ಸಿಇಒ ಮತ್ತು ಎಂಡಿ

KPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ED ಎಂಟ್ರಿ

KPSC ನೇಮಕಾತಿ ಅಕ್ರಮ ಪ್ರಕರಣಕ್ಕೆ ED ಎಂಟ್ರಿ

ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ KPSC ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಮತ್ತು ಮಧ್ಯವರ್ತಿ ಬಸವರಾಜ್ ಕನ್ನಾಳೆ ಅವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲೇ ED ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ವರದಿಯಾಗಿದೆ. CID ತನಿಖೆಯಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಭ್ಯರ್ಥಿಗಳಿಂದ ಹಣ ಪಡೆದ ಆರೋಪಗಳು ಬೆಳಕಿಗೆ ಬಂದಿವೆ. ಸುಮಾರು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತನಿಖೆಯಲ್ಲಿದೆ. “ಕರ್ನಾಟಕದ ಸರ್ಕಾರಿ ನೇಮಕಾತಿ ವ್ಯವಸ್ಥೆಗೆ ಸಂಬಂಧಿಸಿದ KPSC ಅಕ್ರಮ ಪ್ರಕರಣದ ತನಿಖೆ ಇದೀಗ ಮತ್ತಷ್ಟು ತೀವ್ರಗೊಂಡಿದೆ. CID ಬಳಿಕ ED ಕೂಡ ಹಣಕಾಸಿನ ಅಂಶಗಳ ಬಗ್ಗೆ ತನಿಖೆ ನಡೆಸುತ್ತಿದೆ.”

Bottom

ಸಂಬಂಧಿತ ಸುದ್ದಿ

ಸಂದೇಶ ಕಳಿಸಿ